ಗಿರೀಶ ಕಾರ್ನಾಡ -
ಗಿರೀಶ ಕಾರ್ನಾಡ್ರು ೧೯೩೮ ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ|ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ|ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು.
ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ Rhodes scholarship ಪಡೆದುಕೊಂಡು ಆಕ್ಸ್ಫರ್ಡ್ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್ಫರ್ಡ್ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.
ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವ...